Honorable Chief Minister Sri Siddaramaiah inaugurated the Golden Jubilee program organized in Bangalore, established by former Prime Minister Mrs. Indira Gandhi on the occasion of 50th anniversary of the Karnataka State Pollution Control Board. Participat, 19/11/2025
ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯಂದು, ಅವರಿಂದ ಸ್ಥಾಪಿಸಲ್ಪಟ್ಟ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸಹ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಉದ್ಘಾಟಿಸಿದರು .ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಸಚಿವರ ಜೊತೆ ಭಾಗವಹಿಸಲಾಯಿತು.

Honorable Chief Minister Shri Siddaramaiah preached the oath in a program held at Vidhana Soudha Conference Hall as part of National Unity Week. Honorable Deputy Chief Minister D.K. Shivakumar, dignitaries and officers were present in this program., 19/11/2025
ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು, ಪ್ರಮಾಣವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ,ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Vanita, the brave woman of the freedom struggle against the British, the proud woman of India who sacrificed her life for the freedom struggle, my billions of salute to her Lakshmibai on her birthday., 18/11/2025
ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಸಂಗ್ರಾಮದ ವೀರ ವನಿತೆ, ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣ ತ್ಯಾಗ ಮಾಡಿದ ಭಾರತದ ಹೆಮ್ಮೆಯ ನಾರಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದಂದು ಅವರಿಗೆ ನನ್ನ ಶತಕೋಟಿ ನಮನಗಳು.

As India's Prime Minister, the woman of steel who efficiently handled several departments including Central News and Broadcasting, Foreign, Finance, Defense Department, etc. on the birth anniversary of Bharat Ratna Indira Gandhi They will be remembered wi, 18/11/2025
ಭಾರತದ ಪ್ರಧಾನ ಮಂತ್ರಿಗಳಾಗಿ, ಹಲವಾರು ಕ್ರಾಂತಿಕಾರಕ ಯೋಜನೆಗಳು, ದಿಟ್ಟ ನಿರ್ಧಾರಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ಕೇಂದ್ರ ವಾರ್ತಾ ಮತ್ತು ಪ್ರಸಾರ, ವಿದೇಶಾಂಗ, ಹಣಕಾಸು, ರಕ್ಷಣಾ ಇಲಾಖೆ ಸೇರಿದಂತೆ ಹಲವಾರು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ ಉಕ್ಕಿನ ಮಹಿಳೆ, ಭಾರತ ರತ್ನ ಇಂದಿರಾ ಗಾಂಧಿ ಅವರ ಜಯಂತಿಯಂದು
ಅವರನ್ನು ಗೌರವ ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.

Met AICC President Shri Mallikarjuna Kharge today with Honorable Chief Minister of Karnataka in Delhi and discussed many important issues, 17/11/2025
ದೆಹಲಿಯಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಜೊತೆ ಇಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆರವರನ್ನು ಭೇಟಿಯಾಗಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು.
