The holy Cauvery Libra Sankramana was neatly completed and humbly received the honour gratefully given by the semi-lingual Gowda community, 30/10/2025

ಪವಿತ್ರ ಕಾವೇರಿ ತುಲಾ ಸಂಕ್ರಮಣ ಅಚ್ಚುಕಟ್ಟಾಗಿ ಸಂಪನ್ನಗೊಂಡಿದ್ದು ಅರೆಭಾಷಿಕ ಗೌಡ ಜನಾಂಗದ ವತಿಯಿಂದ ಕೃತಜ್ಞತಾ ಪೂರ್ವಕವಾಗಿ ನೀಡಿದ ಸನ್ಮಾನವನ್ನು ವಿನಯಪೂರ್ವಕವಾಗಿ ಸ್ವೀಕರಿಸಿದೆ.


Napoklu and Virajpet Block Congress meeting held at Virajpet Home Office and discussed about party organization and next election, 30/10/2025

ವಿರಾಜಪೇಟೆ ಗೃಹ ಕಚೇರಿಯಲ್ಲಿ ನಾಪೋಕ್ಲು ಮತ್ತು ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ನಡೆಸಿ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆ ಕುರಿತು ಚರ್ಚಿಸಲಾಯಿತು.


The materials were distributed to the student house of the Chief Minister's Amrit Nagaroththan planning phase-04 rd, 30/10/2025

ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಸಾಮಾಗ್ರಿಗಳನ್ನು ವಿತರಿಸಲಾಯಿತು.

 


Participated in the Taluk Planning and Development Committee meeting held at Ponnampete Taluk and discussed the responsibilities of the committee and the format rates of various projects. Various representatives and officers were present at the meeting, 30/10/2025

ಪೊನ್ನಂಪೇಟೆ ತಾಲೂಕಿನಲ್ಲಿ ನಡೆದ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಸಮಿತಿಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿವಿಧ ಯೋಜನೆಗಳ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿವಿಧ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.


B Shettigeri visited Kootiala bridge, inspected the place and discussed with the officers, 30/10/2025

ಬಿ ಶೆಟ್ಟಿಗೇರಿ ಕೂಟಿಯಾಲ ಸೇತುವೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದೆ.